
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,47,417 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 380 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 84,825 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,47,15,361ಕ್ಕೆ ತಲುಪಿದೆ
ಮಹಾರಾಷ್ಟ್ರದಲ್ಲಿ 1,367 ಪ್ರಕರಣಗಳು ಮತ್ತು ರಾಜಸ್ಥಾನದಲ್ಲಿ 792 ಪ್ರಕರಣಗಳು ದಾಖಲಾಗಿವೆ. ದೆಹಲಿಯಲ್ಲಿ 549, ಕೇರಳದಲ್ಲಿ 486, ಕರ್ನಾಟಕದಲ್ಲಿ 479, ಪಶ್ಚಿಮ ಬಂಗಾಳ 294 ಮತ್ತು ಉತ್ತರ ಪ್ರದೇಶದಲ್ಲಿ 275 ಪ್ರಕರಣಗಳಿವೆ.
ಒಮಿಕ್ರಾನ್ ಪ್ರಕರಣಗಳ ಉಲ್ಬಣದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೇಶಾದ್ಯಂತ ಕೊರೊನಾ ವೈರಸ್ ಪರಿಸ್ಥಿತಿಯನ್ನು ಪರಿಶೀಲಿಸಲು ವರ್ಚುವಲ್ ಸಭೆ ನಡೆಸಲಿದ್ದಾರೆ.



