
ಮುಂಬೈ, ಡಿ 30 ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಅವರಿಗೆ ಕೋವಿಡ್ ಸೋಂಕು ಅಮರಿಕೊಂಡಿದೆ.ಈ ಸಂಗತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವರೇ ಬಹಿರಂಗ ಪಡಿಸಿದ್ದಾರೆ. ಇದರ ಜೊತೆಗೆ ಇತರರ ಆರೋಗ್ಯದ ಬಗ್ಗೆಯೂ ಕಾಳಜಿ ತೋರಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಿ, ಆರೋಗ್ಯದ ಕಡೆ ಗಮನ ಕೊಡಿ. ಮೇಲಾಗಿ ತಪ್ಪದೇ ಎಲ್ಲರೂ ಲಸಿಕೆ ಪಡೆದುಕೊಳ್ಳಿ ಎಂದೂ ಅವರು ಕಿವಿಮಾತು ಸಹ ಹೇಳಿದ್ದಾರೆ.
ಸದ್ಯ ಶಿಲ್ಪಾ ಶಿರೋಡ್ಕರ್ ದುಬೈನಲ್ಲಿ ತಮ್ಮ ಕುಟುಂಬದೊಂದಿಗೆವಾಸವಾಗಿದ್ದಾರೆ. ಈ ನಡುವೆ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ನಿನ್ನೆ 3, 900 ಹೆಚ್ಚು ಸೋಂಕು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.



