Breaking NewsLatestರಾಜ್ಯರಾಷ್ಟ್ರೀಯಸುದ್ದಿ
ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಅಮರಿಕೊಂಡ ಸೋಂಕು

ನವದೆಹಲಿ: ಕಳೆದ ಕೆಲ ದಿನಗಳಿಂದ ಚಿತ್ರ ನಟ -ನಟಿಯರು ಮತ್ತು ರಾಜಕಾರಣಿಗಳು ಕೋವಿಡ್ ಗೆ ತುತ್ತಾಗುತ್ತಿದ್ದಾರೆ. ಇದೀಗ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೂ ಕೊರೋನ ಸೋಂಕು ಅಮರಿಕೊಂಡಿದೆ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕ ವಾಸವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿದೆ, ಹೀಗಾಗಿ ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಗಮನ ಕೊಡುವಂತೆ ಸಚಿವ ಗಡ್ಕರಿ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಸೋಮಶೇಖರ್ ಹಾಗೂ ಇದಕ್ಕೂ ಮೊದಲು ಶಿಕ್ಷಣ ಸಚಿವ ಬಿ. ಸಿ ನಾಗೇಶ್ , ಕಂದಾಯ ಸಚಿವ ಆರ್ ಅಶೋಕ್ ಅವರಿಗೂ ಸೋಂಕು ತಗುಲಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಕೊರೋನಾ ಸೋಂಕಿಗೆ ತುತ್ತಾಗಿ ಪ್ರತ್ಯೇಕ ವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
