Latestಕಲಬುರ್ಗಿಜಿಲ್ಲಾ ಸುದ್ದಿ

ಸಂಕ್ರಾಂತಿ ಹಬ್ಬಕ್ಕೆ ತವರಿಗೆ ಹೋಗುವದಾಗಿ ಹೇಳಿದ ಪತ್ನಿಯ ಕೊಲೆಗೈದ ಪಾಪಿ ಪತಿ

ಕಲಬುರಗಿ : ಸಂಕ್ರಾಂತಿ ಹಬ್ಬಕ್ಕೆ ತವರು ಮನೆಗೆ ಹೋಗ್ತಿನಿ ಅಂತಾ ಹೇಳಿದಕ್ಕೆ ಪತ್ನಿಯನ್ನೆ ಪಾಪಿ ಪತಿ ಬರ್ಬರ್ ವಾಗಿ ಹತ್ಯೆ ಮಾಡಿರುವ‌ ಘಟನೆ ನಗರದ ಓಜಾ ಲೇಔಟ್‌ನಲ್ಲಿ ನಡೆದಿದೆ‌.

ಆರತಿ ರಾಠೋಡ್(28) ಪತಿಯಿಂದ ಕೊಲೆಯಾದ ಗೃಹಿಣಿ‌‌. ಕಳೆದ ರಾತ್ರಿ ಪತಿ ಪತ್ನಿ ನಡುವೆ ಜಗಳವಾಗಿದೆ. ಈ ವೇಳೆ ಪತಿ ತಾರಾ ಸಿಂಗ್ ಸಿಲಿಂಡರ್ ಪತ್ನಿ ತೆಲೆಯ ಮೇಲೆ ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಹತ್ಯೆಯ ನಂತರ ಪರಾರಿಯಾಗಿರುವ ತಾರಾಸಿಂಗ್‌ನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ಆರತಿ ಹಾಗೂ ತಾರಾಸಿಂಗ್ ರಾಠೋಡ್ ಮದುವೆಯಾಗಿದ್ದರು. ಪದೇ ಪದೇ ತವರು ಮನೆಗೆ ಹೋಗುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು, ನಿನ್ನೆ ಕೂಡ ಸಂಕ್ರಾಂತಿಗೆ ತವರು ಮನೆಗೆ ಹೋಗುವ ವಿಚಾರವಾಗಿ ಗಲಾಟೆವುಂಟಾಗಿ ಜಗಳ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎನ್ನಲಾಗಿದೆ‌.

ಇನ್ನು ತಾರಾಸಿಂಗ್ ಕಲಬುರಗಿಯ ಖಾಸಗಿ ಶಾಲೆಯ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button