
ಬೆಂಗಳೂರು : ರಾಜ್ಯದ ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿದೆ.
ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಸಿ.ಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ ತೆರವಾಗಿತ್ತು. ಇನ್ನು ಜೆಡಿಎಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ ಮುನಗೋಳಿ ನಿಧನದಿಂದ ಸಿಂಧಗಿ ಕ್ಷೇತ್ರ ತೆರವಾಗಿತ್ತು.



