
ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ತಮಗೆ ರೋಗ ಲಕ್ಷಣಗಳು ಕಡಿಮೆ ಪ್ರಮಾಣದಲ್ಲಿ ಇರುವುದಾಗಿ ತಿಳಿಸಿದ್ದಾರೆ
ಈ ಬಗ್ಗೆ ಟ್ವೀಟ್ ಮಾಡಿರುವ ಅವವರು, ನನಗೆ ಕೊರೋನಾದ ಸೌಮ್ಯ ಗುಣಲಕ್ಷಣಗಳಿದ್ದು ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆ. ನನ್ನ ಜೊತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕವಾಗಿ ಉಳಿಯಿರಿ ಎಂದು ಕೇಳಿಕೊಂಡಿದ್ದಾರೆ.
ನಿನ್ನೆ ದೆಹಲಿಯಲ್ಲಿ 4 ಸಾವಿರದ 99 ಹೊಸ ಪ್ರಕರಣಗಳೊಂದಿಗೆ ದೆಹಲಿಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ವರದಿಯಾಗಿತ್ತು. ಕೊರೋನಾ ಪಾಸಿಟಿವ್ ಪ್ರಮಾಣವು ಶೇಕಡಾ 6.46ರಷ್ಟಿದ್ದು, 6 ಸಾವಿರದ 288 COVID-19 ರೋಗಿಗಳು ಮತ್ತು ಕೋವಿಡ್ ಸೋಂಕಿನ ಶಂಕಿತರು ಹೋಮ್ ಐಸೋಲೇಶನ್‌ನಲ್ಲಿದ್ದಾರೆ.



