ಸ್ವಂತ ಬಲದ ಮೇಲೆ ಪರಿಷತ್ ಚುನಾವಣೆ ಎದುರಿಸುತ್ತೇವೆ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯನ್ನು ಕಾಂಗ್ರೆಸ್ ತನ್ನ ನಮ್ಮ ಶಕ್ತಿಯ ಆಧಾರದ ಮೇಲೆ ಎದುರಿಸುತ್ತದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯ ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಯಾವ ಪಕ್ಷಕ್ಕೆ ಬೆಂಬಲ ಕೊಡಬೇಕು ಎಂಬುದದನ್ನು ನಿರ್ಧರಿಸುವ ಹಕ್ಕು, ಸ್ವಾತಂತ್ರ್ಯ ಆ ಪಕ್ಷಕ್ಕಿದೆ. ನಾನೇಕೆ ಅಡ್ಡಿಬರಲಿ ಎಂದರು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಜೆಡಿಎಸ್ ವಿರುದ್ಧ ಯಾವ ರೀತಿ ಮಾತನಾಡಿದ್ದಾರೆ ಎಂಬುದನ್ನು ಅವಲೋಕಿಸಲಿ ಎಂದು ಹೇಳಿದರು.
ಗುತ್ತಿಗೆ ಹಗರಣ, ನಿರ್ಧಾಕ್ಷಿಣ್ಯ ಕ್ರಮಗೊಳ್ಳಲಿ
ಗುತ್ತಿಗೆ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕೆಂದು ಶಿವಕುಮಾರ್ ಸರ್ಕಾರವನ್ನು ಆಗ್ರಹಿಸಿದರು.
ಇದು ಸಾರ್ವಜನಿಕರ ಹಣ. ಹೀಗಾಗಿ ಗುತ್ತಿಗೆ ಅವ್ಯವಹಾರದಲ್ಲಿ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಯಾರೇ ತಪ್ಪು ಮಾಡಿದ್ದರೂ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದರು.
ರಾಜ್ಯ ಸರ್ಕಾರ ಗುತ್ತಿಗೆ ವ್ಯವಹಾರಗಳನ್ನು ಪರಿಶೀಲಿಸಲು ಎರಡು ಸಮಿತಿ ಮಾಡಿರುವ ನಿರ್ಧಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಅವರು ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಿಸಲಾಗಿದೆ ಅವರಿಂದ ಏನನ್ನೂ ನಿರೀಕ್ಷಿಸಲಾಗದು ಎಂದು ಹೇಳಿದರು.
