Breaking NewsLatestಮೆಟ್ರೋರಾಜ್ಯಸುದ್ದಿ

ಕೊರೊನಾ 3ನೇ ಅಲೆ ಭೀತಿ : ಲಾಕ್ ಡೌನ್ ಬಗ್ಗೆ ಸುಳಿವು ನೀಡಿದ ಸಚಿವ ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೇಂದ್ರ ಸರ್ಕಾರ ಬೆಂಗಳೂರನ್ನು ರೆಡ್‌ ಝೋನ್‌ ಎಂದು ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಕಠಿಣ ನಿಯಮಾವಳಿಗಳು ವಿಧಿಸದೇ ಬೇರೆ ದಾರಿಯಿಲ್ಲ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೈಟ್‌ ಕರ್ಪ್ಯೂ ವಿಧಿಸಲಾಗಿದ್ದು, ಅದು ಮುಗಿಯವ ಮುನ್ನವೇ ತಜ್ಞರೊಂದಿಗೆ ಮತ್ತೊಂದು ಸಭೆ ಕರೆಯುತ್ತೇವೆ. ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಭೆ ಕರೆದು ತೆಗೆದುಕೊಳ್ಳಬೇಕಾದ ತೀರ್ಮಾನಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರದ ಘೋಷಣೆಯಿಂದಾಗಿ ರಾಜ್ಯದಲ್ಲಿ ನಾವು ಎಚ್ಚರಿಕೆಯಿಂದ ಇರಬೇಕಾಗಿದೆ. ಸಭೆಯಲ್ಲಿ ತಜ್ಞರು ನೀಡುವ ಸೂಚನೆಗಳನ್ನು ಯಾವುದೇ ಬದಲಾವಣೆಯಿಲ್ಲದೆ ಜಾರಿಗೆ ತರುತ್ತೇವೆ. ಕೊರೊನಾ ನಿಯಮಾವಳಿಗಳನ್ನು ಜನತೆ ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದಲ್ಲಿ ಲಾಕ್‌ಡೌನ್‌ ಮಾಡದೇ ಬೇರೆ ದಾರಿಯಿಲ್ಲ ಎಂದು ಹೇಳಿದರು.

ಈ ಬಾರಿ ನಾವು ಎಲ್ಲದಕ್ಕೂ ಸಿದ್ದವಾಗಿಯೇ ಇದ್ದೇವೆ. ಜನರ ಆರೋಗ್ಯ ನಮ್ಮ ಧ್ಯೇಯ ಅದಕ್ಕೆ ಯಾರೇ ಕೊರೊನಾ ನಿಮಯಗಳನ್ನು ಉಲ್ಲಂಘಿಸಿದ್ರು ಕ್ರಮ ತೆಗೆದುಕೊಳ್ಳುತ್ತೇವೆ. ನಮಗೆ ಉತ್ಸವ, ಜಾತ್ರೆ, ಮುಖ್ಯವಲ್ಲ ಜನರ ಆರೋಗ್ಯ ಕಾಳಜಿ ಮುಖ್ಯ ಸಭೆಗೆ ಇನ್ನು ದಿನಾಂಕ ನಿಗದಿ ಮಾಡಿಲ್ಲ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button