Latestಜಿಲ್ಲಾ ಸುದ್ದಿರಾಮನಗರ

ಕೋವಿಡ್ 3ನೇ ಅಲೆ ಭೀತಿ: ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ

ರಾಮನಗರ: ಜಿಲ್ಲಾದ್ಯಾಂತ ಕೋವಿಡ್-19 ರ ಮೂರನೇ ಅಲೆಯನ್ನು ನಿಯಂತ್ರಿಸಲು ಹಾಗೂ ಒಮಿಕ್ರಾನ್ ವೈರಾಣು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಪ್ರಮುಖ ಪ್ರವಾಸಿ ಹಾಗೂ ಧಾರ್ಮಿಕ ತಾಣಗಳಿಗೆ ನಿರ್ಬಂಧ ವಿಧಿಸಿದ್ದಾರೆ.

  • ರಾಮನಗರದ ಶ್ರೀ ರಾಮದೇವರ ಬೆಟ್ಟ, ಶ್ರೀ ರೇವಣ ಸಿದ್ದೇಶ್ವರ ಬೆಟ್ಟ, ಚನ್ನಪಟ್ಟಣದ ಕಣ್ವ ಜಲಾಶಯ, ಮಾಗಡಿಯ ಮಂಚನಬೆಲೆ ಜಲಾಶಯ, ಸಾವನದುರ್ಗ. ಕನಕಪುರ ತಾಲೂಕಿನ ಸಂಗಮ, ಮೇಕೆದಾಟು, ಚುಂಚಿ ಜಲಪಾತ ಪ್ರವಾಸಿತಾಣಗಳಿಗೆ ಪ್ರವಾಸಿಗರು ಸಾರ್ವಜನಿಕರು ಆಗಮಿಸುವುದನ್ನು ನಿರ್ಬಂಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರ, ಜಿಲ್ಲಾಡಳಿತವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button