Latestಮೆಟ್ರೋರಾಜ್ಯಸುದ್ದಿ

ಇಂದಿನಿಂದ ರಾತ್ರಿ 10 ರಿಂದ ಬೆಳಗ್ಗೆ 5 ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ರಾತ್ರಿಕರ್ಫ್ಯೂ ಜಾರಿಯಾಗಲಿದೆ. ರಾತ್ರಿಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮುಂದಿನ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಸಂಭವನೀಯ ಮೂರನೇ ಕೋವಿಡ್ ಅಲೆ ತಡೆಗಟ್ಟುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾಕ್ಟರ್ ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವದ ನಾನಾ ದೇಶಗಳಲ್ಲಿ ಕೋವಿಡ್ ಹೊಸ ರೂಪಾಂತರಿಯ ಒಮಿಕ್ರಾನ್ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದರು.

ಇಂದಿನಿಂದ 10 ದಿನಗಳ ಕಾಲ ಗಳ ಕಾಲ ರಾತ್ರಿ ಕರ್ಫ್ಯೂ ಜಾರಿಗೊಳಿಸುತ್ತಿದ್ದು ಇದರ ಸಾಧಕ- ಬಾಧಕ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು

ರಾತ್ರಿ ಕರ್ಪ್ಯೂಗೆ ಜನತೆ ಸಹಕರಿಸಬೇಕು. ಕರ್ಪ್ಯೂ ವಿರೋಧಿಸುವುದು ಸರಿಯಲ್ಲ. ಎಲ್ಲ ಆಯಾಮಗಳನ್ನು ನೋಡಿಕೊಂಡೇ  ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದಲೂ ಬಹಳ ಮುಖ್ಯವಾಗಿದೆ ಎಂದು ಸಚಿವರು ಹೇಳಿದರು .

Spread the love

Related Articles

Leave a Reply

Your email address will not be published. Required fields are marked *

Back to top button