Breaking NewsLatestಜಿಲ್ಲಾ ಸುದ್ದಿಮೈಸೂರು

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ : 7 ಮಂದಿ ಆರೋಪಿಗಳ ಬಂಧನ

ಮೈಸೂರು : ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ ಹಿನ್ನೆಲೆ ನಕಲಿ ನಂದಿನಿ ತುಪ್ಪ ರಾಜ್ಯದ ಬೇರೆ ಬೇರೆ ಕಡೆ ಸರಬರಾಜಾಗಿರುವ ಶಂಕೆ ಇದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಪ್ರಮುಖ ಆರೋಪಿ ಬಂಧನದ ನಂತರ ಮತ್ತಷ್ಟು ಮಾಹಿತಿ ಬಹಿರಂಗವಾಗಲಿದೆ ಎಂದರು.

ಮೈಸೂರು ನಗರದ ಹೊರವಲಯದಲ್ಲಿ ಪತ್ತೆಯಾದ ನಕಲಿ ನಂದಿನಿ ತುಪ್ಪ ಘಟಕ ಪ್ರಕರಣ ಸಂಬಂಧ ಈವರೆಗೆ 7 ಜನ ಆರೋಪಿಗಳನ್ನು ಬಂಧಿಸಿ ತನಿಖೆ ಮಾಡುತ್ತಿದ್ದೇವೆ ಈ ನಕಲಿ ನಂದಿನಿ ತುಪ್ಪ ರಾಜ್ಯದೆಲ್ಲೆಡೆ ಸರಬರಾಜಾಗಿರುವ ಶಂಕೆ ಇದೆ.‌ ಆದ್ದರಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಎಸ್ ಪಿ ಚೇತನ್ ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button