Breaking NewsLatestಮೈಸೂರುರಾಜಕೀಯರಾಜ್ಯ
ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕೆ.ಎಸ್.ಈಶ್ವರಪ್ಪ

ಮೈಸೂರು: ನಾನು ರಾಜಕಾರಣಿ, ನಿರೀಕ್ಷೆಗಳು ಇರುತ್ತವೆ. ಆದರೆ, ಅಂತಿಮವಾಗಿ ಕೇಂದ್ರದ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ನೂತನ ಸಚಿವ ಸಂಪುಟದಲ್ಲಿ ಇರಬೇಕೇ, ಬೇಡವೇ ಎಂಬುದು ನಾನು ತೆಗೆದುಕೊಳ್ಳುವ ನಿರ್ಧಾರವಲ್ಲ. ಬಿಜೆಪಿಯಲ್ಲಿ ಒಂದು ವ್ಯವಸ್ಥೆ ಇದೆ. ಸಿಎಂ, ರಾಜ್ಯಧ್ಯಕ್ಷರು ಹಾಗೂ ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ತಿಳಿಸಿದರು.
ಸಂಪುಟಕ್ಕೆ ಸೇರಿವುದಿಲ್ಲ ಎಂಬ ಶೆಟ್ಟರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಹಿರಿಯರಿದ್ದಾರೆ. ತಮ್ಮ ಜೂನಿಯರ್ ಕೆಳಗೆ ಸಂಪುಟದಲ್ಲಿ ಇರುವುದಿಲ್ಲ ಎನ್ನುವ ತೀರ್ಮಾನ ಮಾಡಿದ್ದಾರೆ. ಇದಕ್ಕೂ ಕಟೀಲ್ ಅವರದ್ದು ಎನ್ನಲಾದ ಆಡಿಯೊಗೂ ಸಂಬಂಧ ಇಲ್ಲ ಎಂದರು.
