Breaking NewsLatestಜಿಲ್ಲಾ ಸುದ್ದಿಮೈಸೂರು
ಹಿಜಾಬ್ ವಿಚಾರದಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕು: ಯದುವೀರ್ ಒಡೆಯರ್

ಹಿಜಬ್ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿ ಇದೆ. ನ್ಯಾಯಾಲಯ ಹಾಗೂ ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಕಠಿಬದ್ಧರಾಗಿ ಇರಬೇಕು. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.
