Latestಕೋಲಾರಜಿಲ್ಲಾ ಸುದ್ದಿ
ರೈತರು ಯಾವುದೇ ಕಾರಣಕ್ಕೂ ಎದೆಗುಂದಬಾರದು, ರೈತರಿಗೆ ಶೀಘ್ರದಲ್ಲೇ ನೆರೆ ಪರಿಹಾರ ನೀಡಲಾಗುವುದು: ಸಿಎಂ ಬೊಮ್ಮಾಯಿ

ಕೋಲಾರ: ಮಳೆಯಿಂದಾಗಿ ಹಾನಿಗೊಳಗಾಗಿದ್ದ ರೈತರ ಬೆಳೆಗಳನ್ನು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲಿಸಿ ನಷ್ಟಕ್ಕೊಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಅರಿತು ನಂತರ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ಮಳೆಯಿಂದ ಹಾನಿಗೊಳಗಾಗಿರುವ ಬೆಳೆಗಳ ಅಂದಾಜಿಸಿ ನಂತರ ಮಳೆಗೆ ಹಾನಿಯಾಗಿರುವ ಮನೆಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು. ರೈತರು ಯಾವುದೇ ಕಾರಣಕ್ಕು ಎದೆಗುಂದಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.
ಇದಕ್ಕೂ ಮುನ್ನ ಕೋಲಾರ ಜಿಲ್ಲೆಯ ನರಸಾಪುರ, ವೇಮಗಲ್ ಮತ್ತು ಮುದುವಾಡಿ ಗ್ರಾಮಗಳಲ್ಲಿ ರೈತರ ತೋಟಗಳಿಗೆ ಭೇಟಿ ನೀಡಿ ಹಾನಿಗೊಳಗಾಗಿರುವ ರಾಗಿ, ತೊಗರಿ, ನೆಲಗಡಲೆ, ಟೊಮೇಟೊ ಸೇರಿದಂತೆ ವಿವಿಧ ಬೆಳೆಗಳ ತೋಟಗಳಲ್ಲಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.



