Latestಮನರಂಜನೆಸಿನಿಮಾ

ಚಿತ್ರಪ್ರೇಮಿಗಳಿಗೆ ಹಬ್ಬ: ಫೆ. 24ಕ್ಕೆ ಏಕ್ ಲವ್ ಯಾ ರಿಲೀಸ್

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿದೆ. ಇದೀಗ ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾಗಳು ಬಿಡುಗಡೆಗೆ ನಿಂತಿದ್ದು, ಈಗಾಗಲೇ ಕೆಲವು ಚಿತ್ರಗಳ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಇದೀಗ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಹೌದು ಪ್ರೇಮ್ ನಿರ್ದೇಶನದ ಸಿನಿಮಾ ಏಕ್ ಲವ್ ಯಾ ಜನವರಿ 21 ರಂದು ರಿಲೀಸ್ ಆಗಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೊಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಈ ಕಾರಣಕ್ಕಾಗಿ ಸಿನಿಮಾದ ರಿಲೀಸ್ ದಿನಾಂಕ ಮುಂದೂಡಿತ್ತು. ಇದೀಗ ಪ್ರೇಮ್ ಈ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಜೊತೆಗೆ ಟ್ರೈಲರ್ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ತಿಂಗಳು 11 ರಂದು ಏಕ್ ಲವ್ ಯಾ ಟ್ರೈಲರ್ ರಿಲೀಸ್ ಮಾಡಲಾಗುವುದು ಎಂದು ಪ್ರೇಮ್ ಸೋಶಿಯಲ್ ಮೀಡಿಯಾ ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಾಗೆ ಚಿತ್ರದ ರಿಲೀಸ್ ಬಗ್ಗೆ ಮಾಹಿತಿ ನೀಡಿರುವ ಅವರು, ಫೆಬ್ರವರಿ 24 ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ ಎಂದು ಘೋಷಿಸಿದ್ದಾರೆ. ಇನ್ನು ಈ ಚಿತ್ರದ ಟ್ರೈಲರ್ ಅನ್ನು ಈ ಹಿಂದೆ ಚಿತ್ರತಂಡ ಮೈಸೂರಿನಲ್ಲಿ ರಿಲೀಸ್ ಮಾಡುವುದಕ್ಕೆ ಪ್ಲಾನ್ ಹಾಕಿಕೊಂಡಿತ್ತು. ಆದರೆ ಕೊರೊನಾ ಕಾರಣದಿಂದ ಅದನ್ನು ಮುಂದೂಡಲಾಗಿತ್ತು. ಇದೀಗ ಫೆ. 11ಕ್ಕೆ ಚಿತ್ರದ ಟ್ರೈಲರ್ ಅನ್ನು ಮೈಸೂರಿನಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಅಂದಹಾಗೆ ಈ ಚಿತ್ರದಲ್ಲಿ ರಾಣಾ, ರಚಿತಾ ರಾಮ್ ಹಾಗೂ ಗ್ರೀಷ್ಮಾ ನಾಣಯ್ಯ ಮುಖ್ಯಭೂಮಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿದ್ದ ಚಿತ್ರದ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದೆ. ಹೀಗಾಗಿ ಸಿನಿಪ್ರಿಯರು ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ರಕ್ಷಿತಾಸ್​ ಫಿಲ್ಮ್​ ಫ್ಯಾಕ್ಟರಿ ಬ್ಯಾನರ್​ನಲ್ಲಿ ರಕ್ಷಿತಾ ಪ್ರೇಮ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ರಚಿತಾ ರಾಮ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಇವರ ಸಾಕಷ್ಟು ಪೋಸ್ಟರ್ ರಿಲೀಸ್ ಆಗಿದ್ದು, ಚಿತ್ರದ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button