Latestರಾಜಕೀಯರಾಷ್ಟ್ರೀಯಸುದ್ದಿ

Luizinho Faleiro: ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೆರೊ

ಪಣಜಿ: ಹಿರಿಯ ಕಾಂಗ್ರೆಸ್ ನಾಯಕ, ಗೋವಾ ಮಾಜಿ ಮುಖ್ಯಮಂತ್ರಿ ಲುಯಿಜಿನೊ ಫೆಲೆರೊ ಅವರು ಸೋಮವಾರ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಟಿಎಂಸಿ ನಾಯಕಿ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬಂದಿರುವ ಲುಯಿಜಿನೊ ಫೆಲೆರೊ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷದ ಚಿನ್ಹೆಯಿಂದ ಸ್ಪರ್ಧಿಸಲಿದ್ದಾರೆ.

ಕಳೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೇವಲ 5 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದು , ಲುಯಿಜಿನೊ ಫೆಲೆರೊ ಅವರು ನವೆಲಿಮ್ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.

2012ರ ನಂತರ ಗೋವಾದಲ್ಲಿ ಕಾಂಗ್ರೆಸ್ ಪಕ್ಷವು ಅಸ್ತಿತ್ವ ಕಳೆದುಕೊಂಡಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತಷ್ಟು ಹಿನ್ನಡೆ ಅನುಭವಿಸುವುದು ಖಚಿತವಾಗಿದ್ದು ಟಿಎಂಸಿ ಹಾಗೂ ಆಮ್‍ಆದ್ಮಿ ಪಕ್ಷವು ಆ ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲು ಮುಂದಾಗಿದೆ

Spread the love

Related Articles

Leave a Reply

Your email address will not be published. Required fields are marked *

Back to top button