
ಮಹಾರಾಷ್ಟ್ರ: ನಂದೂರ್ ಬಾರ್ ಬಳಿ ಚಲಿಸುತ್ತಿದ್ದ ಗಾಂಧಿ ಧಾಮ್- ಪುರಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಸುಮಾರು 10-35ಕ್ಕೆ ನಂದೂರ್ಬಾರ್ ನಿಲ್ದಾಣ ಪ್ರವೇಶಿಸುತ್ತಿದ್ದಂತೆ ರೈಲಿನ ಪ್ಯಾಂಟ್ರಿ ಬೋಗಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.
27 ಬೋಗಿಗಳನ್ನು ಹೊಂದಿದ್ದ ಗಾಂಧಿಧಾಮ್ – ಪುರಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರೈಲಿನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತ್ತು. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದ್ದರಿಂದ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರೈಲು ಗಾಂಧಿಧಾಮದಿಂದ ಪುರಿಯ ಕಡೆಗೆ ಹೊರಟಿತ್ತು. ನಂದೂರ್ ಬಾರ್ ರೈಲು ನಿಲ್ದಾಣದಿಂದ ಸ್ವಲ್ಪ ದೂರದಲ್ಲಿದ್ದಾಗ, ರೈಲಿನ ಪ್ಯಾಂಟ್ರಿ ಬಾಕ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದ ತಕ್ಷಣ ರೈಲ್ ಅನ್ನು ನಿಲ್ಲಿಸಲಾಯಿತ್ತು.
ಮೂಲಗಳ ಪ್ರಕಾರ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಗಿದೆ. ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಎಂದು ವರದಿಯಾಗಿದೆ.



