Breaking NewsLatestರಾಜಕೀಯರಾಷ್ಟ್ರೀಯಸುದ್ದಿ

Goa Elections : ರಂಗೇರಿದ ಗೋವಾ ಚುನಾವಣೆ : ಇಂದು ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಪಣಜಿ : ಪಂಚರಾಜ್ಯ ಚುನಾವಣೆಯಲ್ಲಿ ಗೋವಾ ವಿಧಾನಸಭಾ ಚುನಾವಣೆಯೂ ಜಿದ್ದಾಜಿದ್ದಿಯಿಂದ ಕೂಡಿದ್ದು, ಗೆಲುವಿಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಚುನಾವಣಾ ರಣತಂತ್ರ ಪ್ರಯೋಗಿಸುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಗೋವಾ ಚುನಾವಣೆಯಲ್ಲಿ ಬ್ಯುಸಿಯಾಗಿ ಮತದಾರರನ್ನು ಸೆಳೆಯುತ್ತಿದ್ದಾರೆ.

ಇಂದು ಪ್ರಿಯಾಂಕಾ ಗಾಂಧಿ ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಬಳಿಕ ಪಣಜಿಯಲ್ಲಿ ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಗೋವಾ ವಿಧಾನಸಭಾ ಚುನಾವಣೆಯು ಫೆ.14ರಂದು ನಡೆಯಲಿದೆ. ಒಂದೇ ಹಂತದಲ್ಲಿ ನಡೆಯುವ ಈ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್‌ ಈ ಬಾರಿ ಗೆಲುವು ಕಾಣಬೇಕು ಎಂಬ ದೃಷ್ಟಿಯಲ್ಲಿ ಪ್ರಿಯಾಂಕಾ ಕೂಡ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದಾರೆ.

ರಾಹುಲ್‌ ಗಾಂಧಿ ಕೂಡ ಸದ್ಯ ಗೋವಾ ಚುನಾವಣೆಯಲ್ಲಿ ಬ್ಯುಸಿಯಾಗಿದ್ದು, ಫೆ.4ರಂದು ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಡೊನಾಪೌಲಾದ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button