Breaking NewsLatest

ಹಿಜಾಬ್ – ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ : ರಾಜ್ಯ ಸರ್ಕಾರ ಖಡಕ್​​​​​​​​​ ಸೂಚನೆ

ಬೆಂಗಳೂರು : ಕರ್ನಾಟಕದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಹಿಜಾಬ್‌-ಕೇಸರಿ ಶಾಲು ವಿವಾದ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ ಎಂದರು.

ಸರ್ಕಾರದ ನಿಲುವನ್ನು ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್​ಗೆ ಸೂಚಿಸಿದ್ದಾರೆ. ಹೈಕೋರ್ಟ್​ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button