Latestಜಿಲ್ಲಾ ಸುದ್ದಿಬೆಳಗಾವಿರಾಜ್ಯಸುದ್ದಿ

ಅಲ್ಪಸಂಖ್ಯಾತ ಜನವಸತಿ ಪ್ರದೇಶಗಳಿಗೆ ಶೀಘ್ರ ಅನುದಾನ ಬಿಡುಗಡೆ: ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ: ಅಲ್ಪಸಂಖ್ಯಾತರ ಜನವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ದಿಗೆ ಅನುದಾನ ಬಿಡುಗಡೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ, ಶಾಸಕ ಲಿಂಗೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 11 ಪುರಸಭೆಗಳಿಗೆ ಅನುದಾನ ಬಿಡುಗಡೆ ಮಾಡಿ ಅಲ್ಪಸಂಖ್ಯಾತ ಜನವಸತಿ ಪ್ರದೇಶಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಬೇಲೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2018-19ರಲ್ಲಿ 5.20 ಕೋಟಿ ರೂಪಾಯಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ. ಆದರೆ 2020-21ನೇ ಸಾಲಿನಲ್ಲಿ ಅನುದಾನ ಮಂಜೂರಾತಿ ಮನವಿ ಸರ್ಕಾರದ ಮುಂದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಅನುದಾನ ಬಿಡುಗಡೆ ವಿಳಂಬವಾಗಿದ್ದು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button