Latestಬೆಂಗಳೂರು ಗ್ರಾಮಾಂತರರಾಜಕೀಯರಾಜ್ಯಸುದ್ದಿ
ಬೊಮ್ಮಾಯಿ ನೇತೃತ್ವದಲ್ಲಿ ಕೆಲಸಗಳು ಉತ್ತಮವಾಗಿ ಆಗುತ್ತಿವೆ, ಶಹಬಾಸ್! ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ

ಬೆಂಗಳೂರು: ನಗರ ಪ್ರದೇಶಗಳ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಗ್ರಾಮೀಣ ಭಾಗದಿಂದ ನಗರಗಳಿಗೆ ವಲಸೆ ಬರುತ್ತಿದ್ದಾರೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ.2036ರ ವೇಳೆಗೆ ಶೇ.38.5ರಷ್ಟು ಜನ ನಗರಗಳಲ್ಲಿ ವಾಸ ಮಾಡುತ್ತಿದ್ದಾರೆ. ಹೀಗಾಗಿ ನಗರಗಳಿಗೆ ಮೂಲಸೌಕರ್ಯ ಒದಗಿಸಬೇಕು. ಆದರೆ ನಗರಗಳಿಗೆ ಮೂಲಸೌಕರ್ಯ ಒದಗಿಸುವುದು ಸವಾಲಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ, ಕೊವಿಡ್ ಮೂಲಸೌಕರ್ಯ ವಲಯಕ್ಕೂ ಸವಾಲೊಡ್ಡಿದೆ. ತ್ವರಿತ ಗತಿಯ ನಿರ್ಮಾಣ ಕಾರ್ಯ, ಕನಿಷ್ಟ ವಸ್ತುಗಳ ಬಳಕೆಯಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಇವುಗಳನ್ನು ಇನ್ನಷ್ಟು ಉತ್ತೇಜಿಸಬೇಕಾಗಿದೆ. ಮತ್ತು ರಕ್ಷಣಾ ವಲಯದಲ್ಲಿ ಮತ್ತಷ್ಟು ಮೂಲಸೌಕರ್ಯ ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.



