ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ವಿಷಯವಿಲ್ಲ: ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುವ ಕಾಂಗ್ರೆಸ್ ನವರು ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ ಅಂತಾರೆ. ಅವರಿಗೆ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ವಿಷಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಈ ಹಿಂದೆ ಆರ್.ಎಸ್.ಎಸ್ ಬಗ್ಗೆ ನೀಡಿರುವ ಹೇಳಿಕೆಗೆ ಬದ್ದನಾಗಿದ್ದೇನೆ.ನಾನು ವಸ್ತುವತೆಯ ಆಧಾರದಲ್ಲಿ ಆ ಮಾತನ್ನ ಹೇಳಿದ್ದೇನೆ. ಆರ್.ಎಸ್.ಎಸ್ ಪ್ರಚಾರಕರೆ ಹೇಳಿರುವ ಮಾತುಗಳನ್ನ ಪ್ರಸ್ತಾಪ ಮಾಡಿದ್ದೇನೆ. ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ದ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ಬರಲಿ ಎಂದು ಸವಾಲೆಸೆದರು.
ಆರ್ ಎಸ್ ಎಸ್ ಅಜೆಂಡಾಗಳ ಬಗ್ಗೆ ಚರ್ಚೆ ನಡೆಸಲು ನಾನು ಸಿದ್ದನಿದ್ದು ಆರ್.ಎಸ್.ಎಸ್ ಪ್ರಚಾರಕರೆ ಒಬ್ಬ ಲೇಖಕರ ಮುಂದೆ ಹೇಳಿರುವುದನ್ನೆ ನಾನು ಹೇಳಿದ್ದೇನೆ. ಸ್ವಾತಂತ್ರ್ಯ ಬಂದಾಗ ಆರ್.ಎಸ್.ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂಬ ಸಚಿವ ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್ಡಿಕೆ, ಸ್ವಾತಂತ್ರ್ಯ ಬಂದಾಗ ಈಶ್ವರಪ್ಪ ಹುಟ್ಟಿದ್ರಾ? ನಾನು ಹುಟ್ಟಿರಲಿಲ್ಲ. ಯಾರ ಯಾರ ಕೊಡುಗೆ ಏನ್ ಏನ್ ಇದೆ ಅಂತಾ ಈಶ್ವರಪ್ಪ ಅವರಿಗೆ ಏನ್ ಗೊತ್ತು ಆರ್.ಎಸ್.ಎಸ್ ನವರು ಬಂದು ಪಾಕಿಸ್ತಾನ ಹಾಗುವುದನ್ನ ತಪ್ಪಿಸಿದ್ದಾರ ಎಂದು ಪ್ರಶ್ನಿಸಿದರು.
ಕಾಶ್ಮೀರದಲ್ಲಿ ಶಾಲೆಗೆ ನುಗ್ಗಿ ಭಯೋತ್ಪಾದಕರು ಶಿಕ್ಷಕರನ್ನ ಸುಟ್ಟಿದ್ದಾರೆ. ದೇವೇಗೌಡ್ರು 10 ತಿಂಗಳು ಪ್ರಧಾನಿ ಆಗಿದ್ದ ವೇಳೆ ದೇಶದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸಿದ ಘಟನೆ ಯಾವುದಾದರೂ ನಡೆದಿತ್ತಾ ಎನ್ನುವುದಕ್ಕೆ ಪುರಾವೆ ಕೊಡಿ ಎಂದ ಕುಮಾರಸ್ವಾಮಿ, ಕಳೆದ 4 ದಿನಗಳಲ್ಲಿ ಕಾಶ್ಮೀರದಲ್ಲಿ ಪಂಡಿತರು ಹಾಗೂ ಶಿಕ್ಷಕರನ್ನ ನಾಗರಿಕರನ್ನ ಭಯೋತ್ಪಾದಕರು ಗುಂಡಿಕ್ಕಿದ್ದಾರೆ. ಇದೇನಾ ಆರ್.ಎಸ್.ಎಸ್ ನಿಮಗೆ ಸರಕಾರ ನಡೆಸುವುದು ಹೇಗೆ ಅಂತಾ ಹೇಳಿಕೊಟ್ಟಿರೋದು ಎಂದರು.
ಕಾಂಗ್ರೆಸ್ ನಾಯಕರ ಜತೆಗೆ ಬಿಜೆಪಿ ನಾಯಕರು ವಾದ ಮಾಡಿದ ಹಾಗೆ ನನ್ನ ಬಳಿ ಚರ್ಚೆ ಬೇಡ. ನಾನು ದಾಖಲೆ ಆಧಾರ ಇಟ್ಟಿಕೊಂಡು ಮಾತನಾಡುತ್ತೇನೆ. ಆರ್.ಎಸ್.ಎಸ್ ಹಾಗೂ ಬಿಜೆಪಿ ಸೇರಿಕೊಂಡು ಕಾಶ್ಮೀರವನ್ನ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು.
ಉತ್ತಮ ವಾತಾವರಣ ಇದೆ:
ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಉತ್ತಮ ವಾತಾವರಣವಿದೆ. ಸಿಂದಗಿಯಲ್ಲಿ ಈಗಾಗಲೇ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ಸೂಚನೆ ಇದೆ. ಹಾನಗಲ್ ನಲ್ಲಿ ಗೆಲುವ ಪೈಪೋಟಿ ನೀಡಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ರು.
ಜೆಡಿಎಸ್ ಕಾರ್ಯಾಗಾರದಲ್ಲಿ ನಾನೇ ಹೇಳಿದಂತೆ ಜೆಡಿಎಸ್ ಪಕ್ಷ ಎಲ್ಲಿ ಸ್ಟ್ರಾಂಗ್ ಇದೆ ಅಲ್ಲಿ ಪಕ್ಷ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆ ಅಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಬೆಂಬಲಿಸಿ ಅಂತಾ ಓಪನ್ನಾಗಿ ಹೇಳಿದ್ದೇನೆ. ಕಾಂಗ್ರೆಸ್ ಪಕ್ಷದ ಹಾಗೇ ಹೀನಾಯ ರಾಜಕೀಯ ಮಾಡಲ್ಲ. ಸಿದ್ದರಾಮಯ್ಯ ಅವರ ಹಾಗೆ ಕುಲಗೆಟ್ಟ ರಾಜಕೀಯ ನಾನು ಮಾಡಲ್ಲವೆಂದು ಸಿದ್ದುವನ್ನು ಕುಟುಕಿದರು.
ರಾಜ್ಯದಲ್ಲಿ ಜ್ಯಾತೀತಾ ಶಕ್ತಿ ಉಳಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನ ಬೆಂಬಲಿಸಿ ಅಂತಾ ಹೇಳಿದ್ದೇನೆ. ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿ ತಮ್ಮ ಕೀಳುಮಟ್ಟದ ರಾಜಕೀಯ ಏನೂ ಎಂಬುದನ್ನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಪಕ್ಷವನ್ನ 2023ಕ್ಕೆ ಅಧಿಕಾರಕ್ಕೆ ತರಲು ಕಾರ್ಯಾಗಾರಗಳನ್ನ ಮಾಡಿದ್ದೇನೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನ ಜನತೆ ಮುಂದೆ ಇಡಲು ಪ್ರಾರಂಭ ಮಾಡಿದ್ದೇನೆ.
ಇದನ್ನ ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ಕಾರ್ಯಾಗಾರಗಳನ್ನ ಮಾಡುವ ಮೂಲಕ ಮುಂದೆಯೂ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ ಎಂದು ವಿವರಿಸಿದರು
ಇದು ಉಪ ಚುನಾವಣೆಯಲ್ಲಿ ಯಾರನ್ನೊ ಓಲೈಸಿಕೊಳ್ಳಲು ಕಾರ್ಯಾಗಾರ ಮಾಡಿಲ್ಲ. ಓಲೈಸೊ ರಾಜಕಾರಣ ಏನಿದ್ರು ಬಿಜೆಪಿ ಪಕ್ಷದ್ದು ಹಿಂದುತ್ವದ ಹೆಸರಿನಲ್ಲಿ ಸಂದೇಶ ಕೊಡಲು ಬಿಜೆಪಿಯವರು ಹೊರಟ್ಟಿದ್ದಾರೆ. ಹಿಂದುತ್ವದ ರಾಜಕಾರಣ ಮಾಡಿಕೊಂಡು ಮತಗಳಿಗೊಸ್ಕರ ನಾನು ಓಟ್ ಬ್ಯಾಂಕ್ ರಾಜಕಾರಣ ನಾನು ಮಾಡುವುದಿಲ್ಲವೆಂದರು.



