Latestಮೆಟ್ರೋರಾಜಕೀಯ

ಹಣದ ಅಬ್ಬರದಲ್ಲಿ ಜೆಡಿಎಸ್ ಸೋಲು ಬೇಸರ ತಂದಿದೆ: ಕುಮಾರಸ್ವಾಮಿ

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ ಎಂದು ಜೆಡಿಎಸ್ ಧುರೀಣ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದಿದ್ದಾರೆ. 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ದೂರಿದ್ದಾರೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ಶುಭಾಶಯ ಹೇಳಿದ್ದಾರೆ

Spread the love

Related Articles

Leave a Reply

Your email address will not be published. Required fields are marked *

Back to top button