ಹಿಜಾಬ್ , ಕೇಸರಿ ವಿವಾದ : ಹೈಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ

ಬೆಂಗಳೂರು : ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನ ರಾಜ್ಯ ಹೈಕೋರ್ಟ್ ಇಂದು ನಡೆಸಲಿದೆ.
ನಿನ್ನೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ಆರಂಭಿಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ತಮ್ಮ ವಾದ ಮಂಡಿಸಿ, ಹಿಜಾಬ್ ಇಸ್ಲಾಂ ಅತ್ಯಗತ್ಯ ಆಚರಣೆಯಾಗಿದೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ವಾದ-ಪ್ರತಿವಾದದ ನಡುವೆ ಮಧ್ಯಾಹ್ನದ ಲಂಚ್ ಬ್ರೇಕ್ ಬಂದ ಕಾರಣ, ಹೈಕೋರ್ಟ್ ಏಕಸದಸ್ಯ ಪೀಠವು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.
ಇದಲ್ಲದೇ ಪವಿತ್ರ ಖುರಾನ್ ನಲ್ಲಿನ ಕೆಲ ಭಾಗಗಳನ್ನು ಉಲ್ಲೇಖಿಸಿದಂತ ಅವರು, ಸರ್ಕಾರ ವಿದ್ಯಾರ್ಥಿನಿಯರ ಹಕ್ಕನ್ನು ಉಲ್ಲಂಘನೆ ಮಾಡಿದೆ. ದೇಶದ ಸಂವಿಧಾನದ 19(1) ಎ ಅಡಿಯಲ್ಲಿ ಬಟ್ಟೆ ಧರಿಸುವುದು ಧಾರ್ಮಿಕ ಹಕ್ಕಾಗಿದೆ. ಈ ನಿಯಮದ ನಡುವೆ ಗೊಂದಲವಿದ್ದರೇ ಕೋರ್ಟ್ ತೀರ್ಮಾನ ಮಾಡಬೇಕು ಎಂದು ಮನವಿ ಮಾಡಿದರು.
