ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ರೆಡಿ

ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಅಣಿಯಾಗಿದ್ದಾರೆ.
ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವಿಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.
ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ರೆಡಿಯಾಗಿದ್ದಾರೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ ಧ್ವನಿವರ್ಧಕಗಳನ್ನು ಬಳಸುವ ಮಸೀದಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಧ್ವನಿವರ್ಧಕಗಳನ್ನು ತೆಗೆದು ಹಾಕಿ. ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದಿದ್ದರು.
