Breaking NewsLatestಜಿಲ್ಲಾ ಸುದ್ದಿರಾಜಕೀಯರಾಮನಗರ

ಪಕ್ಷದ ಹೈಕಮಾಂಡ್ ಒಪ್ಪಿದ್ರೆ ಕನಕಪುರದಿಂದಲೇ ಸ್ಪರ್ಧೆ: ಸಿ ಪಿ ಯೋಗೇಶ್ವರ್​​​​

ರಾಮನಗರ : ಪಕ್ಷದ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ರೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿ ಸುವುದಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಮುಂದಿನ ಚುನಾವಣೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಅದು ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ಕನಕಪುರ ಕ್ಷೇತ್ರದಿಂದ ನೀವು ಸ್ಪರ್ಧಿಸಬೇಕೆಂದು ತೀರ್ಮಾನ ತೆಗೆದುಕೊಂಡ್ರೆ ನನಗೆ ಯಾವುದೇ ಭಯ ಇಲ್ಲ. ಕನಕಪುರದಿಂದ ಸ್ಪರ್ಧಿಸಲು ಸಿದ್ದ ಎಂದರು.

ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ಮೇಕೆದಾಟು :

ಮೇಕೆದಾಟು ಇರೋದು ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ. ಪಾದಯಾತ್ರೆ ವಿಚಾರವಾಗಿ ಮೇಕೆದಾಟು ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಯಾವುದೇ ದಿನಗಳಲ್ಲಿ ಅವರು ಈ ಬಗ್ಗೆ ಮಾತನಾಡಿಲ್ಲ. ಈ ಹಿಂದೆ ಅವರೇ ಸಾಕಷ್ಟು ಬಾರಿ‌ ಸಚಿವರಾಗಿದ್ರು. ಆ ವೇಳೆ ಅವರು ಮೇಕೆದಾಟು ಬಗ್ಗೆ ಮಾತನಾಡಲಿಲ್ಲ‌. ಮೇಕೆದಾಟು ಯೋಜನೆ ಜಾರಿಗೆ ಕೆಲವೊಂದು ಟೆಕ್ನಿಕಲ್ ಸಮಸ್ಯೆ ಇದೆ. ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ತಮಿಳುನಾಡು ಸಿಎಂ ಜೊತೆ ಮಾತನಾಡಿ ಕೇಸ್ ವಾಪಸ್ ಗೆ ಒತ್ತಾಯ ಮಾಡಲಿ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಇದೆ:

ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಕೇಸ್ ನಡೆಯುತ್ತಿದೆ. ಅದನ್ನು ಬಿಟ್ಟು ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು. ಎಲ್ಲರೂ ಹೇಳುವ ಆಗೆ ಇದು ರಾಜಕೀಯ ಗಿಮಿಕ್ ಆಗ್ತಿದೆ. ಇದಲ್ಲದೆ ಮೇಕೆದಾಟು ಪಾದಯಾತ್ರೆ ರಾಜಕೀಯವಾಗಿ ಲಾಭ ಪಡೆಯಬಹುದು ಅಂದುಕೊಂಡಿದ್ದಾರೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button