Breaking NewsLatestಮನರಂಜನೆಸ್ಯಾಂಡಲ್ ವುಡ್

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್​ ಕಳಿಸಿದ ಆರೋಪ; ಆ್ಯಡಂ ಬಿದ್ದಪ್ಪ ಬಂಧನ

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಈ ಹಿಂದೆ ಡ್ರಗ್ಸ್ ಕೇಸ್ ನಲ್ಲಿ ಬಂಧಿಯಾಗಿದ್ದ ಅವರು ಜಾಮೀನು ಮೂಲಕ ಹೊರಗೆ ಬಂದಿದ್ದಾರೆ. ಇದೀಗ ಅವರು ಮತ್ತೆ ಇಂದಿರಾನಗರದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹೌದು ನಟಿ ಸಂಜನಾ ಗಲ್ರಾನಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಬಿದ್ದಪ್ಪ ಅವರನ್ನು ಇಂದಿರಾ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಸಂಜನಾ ಗಲ್ರಾಣಿ ಹಾಗೂ ಆ್ಯಡಂ ಸ್ನೇಹಿತರಾಗಿದ್ದರು.

ಕೆಲವೇ ದಿನಗಳ ಹಿಂದೆ ಸಂಜನಾಗೆ ಅಶ್ಲೀಲ ಮೆಸೇಜ್​ಗಳನ್ನು ಕಳಿಸಿದ್ದಾರೆ ಎಂಬ ಆರೋಪ ಮಾಡಿದ್ದರು. ಈ ಬಗ್ಗೆ ಸಂಜನಾ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಇಂದಿರಾ ನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಈ ವೇಳೆ ಸಂಜನಾ ಗಲ್ರಾನಿ ನಡುವಿನ ವಾಟ್ಸಪ್​ ಸಂದೇಶಗಳನ್ನು ಆ್ಯಡಂ ಡಿಲೀಟ್​ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button