
ಶಾರ್ಜಾ : ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಬೃಹತ್ ಜಯ ಗಳಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸೂಪರ್ ಲೀಗ್ ನಲ್ಲಿ ಪ್ಲೇ ಆಫ್ ತಲಪುವ ತನ್ನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 90 ರನ್ ಗೆ ನಿಯಂತ್ರಿಸಿತು.
ನಥನಾನ್ ಕಲ್ಟರ್ ನೈಲ್ (4/14), ನಿಶಾಮ್ (3/13) ಹಾಗೂ ಜಸ್ಪ್ರೀತ್ ಬುಮ್ರಾ (2/14) ಅದ್ಭುತ ಬೌಲಿಂಗ್ ಪ್ರದರ್ಶಿಸಿ ರಾಜಸ್ಥಾನದ ಸೋಲಿಗೆ ಮುನ್ನುಡಿ ಬರೆದರು.
ನಂತರ ರೋಹಿತ್ ಶರ್ಮಾ (22) ಮತ್ತು ಇಶಾನ್ ಕಿಶನ್ (50*) ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸುವುದರೊಂದಿಗೆ ಇನ್ನೂ 11.4 ಓವರ್ ಬಾಕಿ ಇರುವಾಗಲೇ ಜಯದ ಗುರಿ ತಲುಪಿತು.



