Latestಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ಟ್ರೇಡ್ ಮಾರ್ಕ್ ಹಾಡು ಬಿಡುಗಡೆ ಮಾಡಿದ ಜೇಮ್ಸ್ ಚಿತ್ರತಂಡ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ಹಾಗೂ ಟೀಸರ್ ನೋಡಿರೋ ಅಭಿಮಾನಿಗಳು ಸಿನಿಮಾ ಕಣ್ಮುಂಬಿಕೊಳ್ಳೋಕೆ ತುದಿಗಾಲಲ್ಲಿ ನಿಂತಿದ್ದಾರೆ. ಈ ಮಧ್ಯೆ ಚಿತ್ರತಂಡ ಚಿತ್ರದ ಹಾಡೊಂದನ್ನ ಬಿಡುಗಡೆ ಮಾಡಿದ್ದು ಶಿವರಾತ್ರಿಯ ಸಂಭ್ರಮವನ್ನ ಮತ್ತಷ್ಟು ಹೆಚ್ಚಿಸಿದೆ.

ಪುನೀತ್ ರಾಜ್ ಕುಮಾರ್ ಹಾಗೂ ಚೇತನ್ ಕುಮಾರ್ ಕಾಂಬಿನೇಷನ್ ನ ಜೇಮ್ಸ್ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಇದೇ ಮೊದಲ ಭಾರಿಗೆ ಪುನೀತ್ ಆರ್ಮಿ ಆಫಿಸರ್ ಗೆಟಪ್ ನಲ್ಲಿ ಕಾಣೀಸಿಕೊಂಡಿದ್ದು ಸಿನಿಮಾ ನೋಡೋಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇದೀಗ ಚಿತ್ರತಂಡ ಅಪ್ಪುವಿನ ಟ್ರೇಡ್ ಮಾರ್ಕ್ ಇರುವ ಹಾಡೊಂದನ್ನ ಬಿಡುಗಡೆ ಮಾಡಿದ್ದು ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಗಳಿಸಿದೆ.

ಚೇತನ್ ಕುಮಾರ್ ಬರೆದಿರುವ ಸಾಹಿತ್ಯಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು ವಿಕ್ಕಿ, ಅದಿತಿ ಸಾಗರ್, ಚಂದನ್ ಶೆಟ್ಟಿ, ಶರ್ಮಿಳಾ, ಯುವರಾಜ್ ಕುಮಾರ್ ಹಾಗೂ ಚರಣ್ ರಾಜ್ ಹಾಡಿಗೆ ಧನಿಯಾಗಿದ್ದಾರೆ. ಇದು ಕೇವಲ ಹಾಡಲ್ಲ, ಎಲ್ಲಾ ಅಭಿಮಾನಿಗಳ ದನಿಯಿದು ಎಂದು ಹಾಡಿನ ಪ್ರಾರಂಭದಲ್ಲೇ ಇದ್ದು ಅದಕ್ಕೆ ತಕ್ಕಂತೆ ಹಾಡು ಮೂಡಿ ಬಂದಿದೆ.

ಪಿಆರ್​ಕೆ ಯುಟ್ಯೂಬ್​ನಲ್ಲಿ ಜೇಮ್ಸ್ ಸಿನಿಮಾದ ಟ್ರೇಡ್ ಮಾರ್ಕ್ ಹಾಡಿನ ಕನ್ನಡ ಅವತರಣಿಕೆ ರಿಲೀಸ್ ಆಗಿದ್ದು, ಒಟ್ಟು 5 ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದೆ. ಹಾಡಿಗೆ ಎಲ್ಲರಿಂದಲೂ ಮೆಚ್ಚುಗೆ ಸಿಗುತ್ತಿದ್ದು ಸ್ಯಾಂಡಲ್​ವುಡ್​ ನಾಯಕಿಯರಾದ ರಚಿತಾ ರಾಮ್, ಆಶಿಕಾ ರಂಗನಾಥ್ ಹಾಗೂ ಶ್ರೀಲೀಲಾ ಈ ಹಾಡಿನಲ್ಲಿ ಹೆಜ್ಜೆಹಾಕಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button