Latestಕಲಬುರ್ಗಿಜಿಲ್ಲಾ ಸುದ್ದಿರಾಜಕೀಯ
ಉಪಚುನಾವಣೆ ಪ್ರಚಾರ ಅಂತ್ಯ: ದತ್ತಾತ್ರೇಯ ದೇವರಿಗೆ ಮೊರೆಹೋದ ದೇವೇಗೌಡ, ಕುಮಾರಸ್ವಾಮಿ

ಕಲಬುರ್ಗಿ: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಪ್ರಚಾರ ಮುಗಿಯುತ್ತಿದ್ದಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌ಡಿ ದೇವೆಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದಾರೆ. ಅಫಜಲಪುರ ತಾಲೂಕಿನ ದೇವಲ್ ಗಾಣಗಾಪೂರಕ್ಕೆ ಆಗಮಿಸಿದ ಇಬ್ಬರು ನಾಯಕರು ದತ್ತಾತ್ರೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಂದಗಿ ಮತ್ತು ಹಾನಗಲ್ ಉಪಚುನಾಣೆ ಪ್ರಚಾರ ಮುಗಿದ ಬೆನ್ನಲ್ಲೆ ದಳಪತಿಗಳು ನಿರಾಳರಾಗಿದ್ದಾರೆ. ಉಪಚುನಾಣೆಯಲ್ಲಿ ಜೆಡಿಎಸ್ ಪಕ್ಷ ವಿಜಯಶಾಲಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ದಳಪತಿಗಳಿಗೆ ಜೆಡಿಎಸ್ ಮುಖಂಡ ಬಂಡೆಪ್ಪ ಖಾಶೆಂಪುರ ಸಾಥ್ ನೀಡಿದ್ದರು.
ಬಹಿರಂಗ ಪ್ರಚಾರಕ್ಕೂ ಮುಕ್ತಾಯಕ್ಕೂ ಮುನ್ನ ನಿನ್ನೆ ಸಿಂದಗಿಯಲ್ಲಿ ಪ್ರಚಾರ ನಡೆಸಿದ್ದ ದೇವೆಗೌಡ ಮತ್ತು ಕುಮಾರಸ್ವಾಮಿ ಇಂದು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.



