Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿ

ಕಾಳಿ ನದಿಯಲ್ಲಿ ಯುವಕನನ್ನು ಹೊತ್ತೊಯ್ದ ಮೊಸಳೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ ಸೋಮವಾರ ರಾತ್ರಿ ನಡೆದಿದೆ.

ದಾಂಡೇಲಿಯ ಪಟೇಲ್ ನಗರದ ಆರ್ಷದ್ ಖಾನ್ (22) ಮೊಸಳೆ ದಾಳಿಗೆ ಬಲಿಯಾದ ಯುವಕನಾಗಿದ್ದು, ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋಗಿದ್ದ. ಈ ವೇಳೆ ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ಆತನನ್ನು ಎಳೆದೊಯ್ದಿದೆ.

ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಯುವಕನ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button