Breaking NewsLatestರಾಜ್ಯಸಿನಿಮಾಸುದ್ದಿಸ್ಯಾಂಡಲ್ ವುಡ್
ದಿ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ತೆರೆಕಂಡು ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಿಸಿದ್ದಾರೆ.
ಸಿನಿಮಾ ವೀಕ್ಷಣೆ ಬಳಿಕ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಂತರ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಯಲಿ ಸಿಕ್ಕು ಪ್ರಾಣವನ್ನ ಬಿಟ್ಟಿದ್ದಾರೆ. ಹೀಗಾಗಿಯೇ ಅಲ್ಲಿ ಆರ್ಟಿಕಲ್ 370 ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.
