Breaking NewsLatestಮೆಟ್ರೋರಾಜ್ಯಸುದ್ದಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ಹಲವು ಕಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ ಸೇರಿದಂತೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ನಗರದಲ್ಲಿ ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಮಳೆಯಾಗುವುದರಿಂದ ಜನರಿಗೆ ಆರಾಮಾಗಲಿದೆ. ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ
