Breaking NewsLatestಜಿಲ್ಲಾ ಸುದ್ದಿಬೆಳಗಾವಿರಾಜಕೀಯ
ರಮೇಶ್ ಕಾಂಗ್ರೆಸ್ ಸೇರ್ಪಡೆಯಾಗುವುದು ಜಗತ್ತಿನ ಎಂಟನೇ ಅದ್ಭುತ: ಸತೀಶ್ ಜಾರಕಿಹೊಳಿ ಲೇವಡಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರ್ಪಡೆಯಾಗುವುದು ಜಗತ್ತಿನ ಎಂಟನೇ ಅದ್ಭುತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಯಾರು ಬರುತ್ತಾರೆ ಎಂಬುದರ ಬಗ್ಗೆ ಸ್ಪಷ್ಟಪಡಿಸುತ್ತೇನೆ. ಸಿದ್ದರಾಮಯ್ಯನವರು ಉತ್ತಮ ನಾಯಕರಾಗಿದ್ದರಿಂದ ಈಗ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದರು.
ಸದ್ಯ ಜೆಡಿಎಸ್ ಮತ್ತು ಬಿಜೆಪಿಯಿಂದ ಯಾರು ಬರುತ್ತಾರೆ ಎಂದು ಹೇಳುವುದಕ್ಕೆ ಲಿಸ್ಟ್ ಇಲ್ಲ. ಸ್ವಲ್ಪ ಸಮಯದ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಮತ್ತು ಶಾಸಕರ ಮೇಲೆ ಹಿಡಿತವಿಲ್ಲ. ಹಾಗಾಗಿ ಕ್ಯಾಬಿನೆಟ್ ಸಭೆಯಲ್ಲಿ ಸಚಿವರು, ಶಾಸಕರು ಏನೇನು ಮಾತನಾಡುತ್ತಾರೆ. ಸಿಎಂ ಮೀರಿ ಯಾರೂ ಮಾತನಾಡಬಾರದು. ಸಿಎಂ ಅವರ ಕೈಯಲ್ಲಿ ಎಲ್ಲ ಹಿಡಿತ ಇರಬೇಕು ಎಂದು ಚಾಟಿ ಬೀಸಿದರು.
