
ದೆಹಲಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ರಾಂಚಿಯ ವಿಶೇಷ ಕೇಂದ್ರೀಯ ತನಿಖಾ ದಳ ತೀರ್ಪು ನೀಡಿದೆ.
ಜಾರ್ಖಂಡ್‌ನ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂ ಹಣವನ್ನು ಅವರು ಅಕ್ರಮ ಹಿಂಪಡೆದ ಪ್ರಕರಣದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಇನ್ನು ಈ ಪ್ರಕರಣದಲ್ಲಿ ನ್ಯಾಯಾಧೀಶ ಸಿಕೆ ಶಶಿ ಅವರು ಇಂದು ತೀರ್ಪು ಪ್ರಕಟಿಸಿದ್ದು, ಈ ವೇಳೆ ಆರ್ಜೆಡಿ ಮುಖ್ಯಸ್ಥರು ನ್ಯಾಯಾಲಯದಲ್ಲಿ ಹಾಜರಿದ್ದರು.



