Latestಕೊಡಗುಜಿಲ್ಲಾ ಸುದ್ದಿ
ಹುತಾತ್ಮ ಯೋಧ ಅಲ್ತಾಫ್ ಅಹ್ಮದ್ ಗೆ ಗಣ್ಯರಿಂದ ಅಂತಿಮ ನಮನ

ಕೊಡಗು : ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಿಮಾಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗು ಮೂಲದ ಯೋಧ ಅಲ್ತಾಫ್ ಅಹಮ್ಮದ್ ಅವರ ಅಂತಿಮ ಸಂಸ್ಕಾರ ನಡೆಯಿತು.
ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಯೋಧ ಅಲ್ತಾಫ್ ಅಹಮ್ಮದ್ ಅವರ ಪಾರ್ಥಿವ ಶರೀರಕ್ಕೆ ಶಾಸಕರು ಹಾಗೂ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.
ಭಾರತೀಯ ಸೇನೆ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ 21 ಸುತ್ತು ಕುಶಾಲತೋಪು ಸಿಡಿಸಿ ಸೇನಾ ಗೌರವ ಸಲ್ಲಿಸಲಾಯಿತು.



