Latestಚಿಕ್ಕಮಗಳೂರುಜಿಲ್ಲಾ ಸುದ್ದಿ
ಹಿನ್ನಡೆ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ-ಎಸ್ ಎಲ್ ಬೋಜೇಗೌಡ

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಹಿನ್ನಡೆ ಅನುಭವಿಸತೊಡಗಿದ್ದು ಈ ಬಗ್ಗೆ ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ಹೇಳಿದ್ದಾರೆ. ಚಿಕ್ಕಮಗಳೂರು ನಗರಸಭೆಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸಿ ಅಭಿವೃದ್ಧಿ ಕಡೆಗಣಿಸಲಾಗಿದೆ. ನಗರಸಭೆಯನ್ನು ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತಕ್ಕೆ ಸದಸ್ಯರು ಒತ್ತು ನೀಡಬೇಕು. ಸ್ಥಳೀಯ ನಾಯಕರು ಉತ್ತಮ ಕಾರ್ಯಗಳನ್ನು ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಕೇಂದ್ರ, ರಾಜ್ಯದಿಂದ ನಾಯಕರನ್ನು ಕರೆಸಿ ಪ್ರಚಾರ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತಿರಲಿಲ್ಲ ಎಂದು ಟೀಕಿಸಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಹಣದ ಹೊಳೆಯನ್ನು ಹರಿಸಿವೆ. ಜೆಡಿಎಸ್ನಿಂದ ಆಯ್ಕೆಗೊಂಡಿರುವ ಅಭ್ಯರ್ಥಿಗಳು ನಗರಸಭೆಯನ್ನು ಭ್ರಷ್ಟಾಚಾರ ಮುಕ್ತವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.



