Latestಉಡುಪಿಕಲಬುರ್ಗಿ

ಮೇಲಾಧಿಕಾರಿಗಳ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನ

ಕಲಬುರಗಿ: ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಸಿಬ್ಬಂದಿಯೋರ್ವ ಡೆತ್ ನೋಟ್ ಬರೆದಿಟ್ಟು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಕಿನಾರಾ ಕ್ಯಾಪಿಟಲ್ ಕಂಪನಿ ಕಲಬುರಗಿ ಶಾಖೆಯ ಅಸಿಸ್ಟೆಂಟ್ ಮ್ಯಾನೇಜರ್ ಎಂದು ಹೇಳಿಕೊಂಡಿರುವ ಕೃಷ್ಣಕಾಂತ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಂಭೀರ ಪರಸ್ಥೀತಿಯಲ್ಲಿರುವ ಅವರನ್ನು ನಗರದ ಕೆಬಿಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೃಷ್ಣಕಾಂತ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕಚೇರಿಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಬಳಿಕ ಲೈವ್ ವಿಡಿಯೋ ಮಾಡಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಅವಲತ್ತುಕೊಂಡಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸಮರ್ಥವಾಗಿ ಕೆಲಸ ಮಾಡಿದರೂ ಅನಗತ್ಯವಾಗಿ ಕಲಬುರಗಿಯಿಂದ ವಿಜಯಪುರ ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಪ್ರಶ್ನಿಸಿದ್ರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ‌. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುವ ಬದಲಾಗಿ ಯಾವುದೆ ನೋಟಿಸು ನೀಡದೆ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದರು

ಕೃಷ್ಣಕಾಂತ ತನ್ನ ಆತ್ಮಹತ್ಯೆಗೆ ಕಿನಾರಾ ಕ್ಯಾಪಿಟಲ್‌ನ ಐದು ಜನ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಎಂಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button