Breaking NewsLatestಜಿಲ್ಲಾ ಸುದ್ದಿಮೈಸೂರು
ಉಕ್ರೇನ್ನಲ್ಲಿರುವ ಮೈಸೂರು ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುತ್ತಿದ್ದೇವೆ

ಮೈಸೂರು: ಉಕ್ರೇನ್ನಲ್ಲಿ ಸಿಲುಕಿರುವ ಮೈಸೂರು ಜಿಲ್ಲೆಯ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಉಕ್ರೇನ್ನಲ್ಲಿರುವ ಮೈಸೂರು ವಿದ್ಯಾರ್ಥಿಗಳ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಎಷ್ಟು ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.
ನಗರದ ಮೃಗಾಲಯಕ್ಕೆ ಹೊರಭಾಗದ ಪಾರ್ಕಿಂಗ್ ಸ್ಥಳದಿಂದ ಮೃಗಾಲಯದೊಳಗಿನ ಟಿಕೆಟ್ ಕೌಂಟರ್ವರೆಗೂ ನಿರ್ಮಾಣವಾಗಿರುವ ಅಂಡರ್ಪಾಸ್ ಉದ್ಘಾಟನೆ ಮಾಡಿದರು. ಮೃಗಾಲಯದ ಮುಂಭಾಗದ ರಸ್ತೆ ದಾಟಲು ಪ್ರವಾಸಿಗರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಈ ಸುರಂಗ ಮಾರ್ಗ ನಿರ್ಮಾಣ ಮಾಡಲಾಗಿದೆ ಎಂದರು.
