Breaking NewsLatestಜಿಲ್ಲಾ ಸುದ್ದಿರಾಜ್ಯರಾಷ್ಟ್ರೀಯವಿದೇಶಸುದ್ದಿಹಾವೇರಿ

ಉಕ್ರೇನ್ ಶವಗಾರದಲ್ಲಿ ನವೀನ್ ಮೃತ ದೇಹ: ದಾಳಿ ಮುಗಿದ ಬಳಿಕ ಭಾರತಕ್ಕೆ ರವಾನೆ

ಬೆಂಗಳೂರು: ಉಕ್ರೇನ್ ಶೆಲ್ ದಾಳಿಯಲ್ಲಿ ಮೃತಪಟ್ಟ ನವೀನ್ ಮೃತದೇಹ ಸಿಕ್ಕಿದ್ದು, ದೇಹವನ್ನು ಉಕ್ರೇನಿನ‌ ಶವಾಗಾರದಲ್ಲಿ ಇಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಉಕ್ರೇನ್​ನಲ್ಲಿ ನಡೆಯುತ್ತಿರುವ ದಾಳಿ ನಿಂತ ನಂತರ ಮೃತ ದೇಹವನ್ನು ಭಾರತಕ್ಕೆ ತರುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹ ತರುವ ಬಗ್ಗೆ ಕೇಂದ್ರ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಉಕ್ರೇನಿನ‌ ಶವಾಗಾರದಲ್ಲಿ ನವೀನ್ ಮೃತ ದೇಹ ಇಡಲಾಗಿದ್ದು, ಉಕ್ರೇನ್ ನಲ್ಲಿ ನಡೆಯುತ್ತಿರುವ ದಾಳಿ ನಿಂತ ನಂತರ ಮೃತ ದೇಹವನ್ನು ಭಾರತಕ್ಕೆ ತರುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ನಡೆಸಿದ ಶೆಲ್ ದಾಳಿಗೆ ಹಾವೇರಿ ಮೂಲದ ನವೀನ್ ಗ್ಯಾನಗೌಡರ್ ಬಲಿಯಾಗಿದ್ದಾರೆ ನವೀನ್ ಮೃತದೇಹವನ್ನು ಭಾರತಕ್ಕೆ ಕರೆತರುವಂತೆ ನವೀನ್ ಪೋಷಕರು ಸರ್ಕಾರವನ್ನು ಮನವಿ ಮಾಡುತ್ತಲೇ ಇದ್ದಾರೆ. ಇದೀಗ ಸಿಎಂ ನವೀನ್ ಮೃತದೇಹವನ್ನ ಭಾರತಕ್ಕೆ ತರುವ ಭರವಸೆ ನೀಡಿದ್ದು ಮೃತ ಮಗನನ್ನು ನೆನೆದು ಪೋಷಕರು ಕಣ್ಣೀರು ಹಾಕ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button