Breaking NewsLatestಮೆಟ್ರೋರಾಜ್ಯಸುದ್ದಿ

ವಿದ್ಯುತ್, ಹಾಲಿನ ದರ ಏರಿಕೆ ಅವಸರದ ತೀರ್ಮಾನ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನೀರು, ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಬಗ್ಗೆ ಯಾವುದೇ ತರದ ಅವಸರದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರವಿದ್ದರೂ ದರ ಹೆಚ್ಚಿಸುವ ಕುರಿತಾಗಿ ಪ್ರಸ್ತಾವನೆ ಸಲ್ಲಿಕೆಯಾಗುವುದು ಸಹಜ. ಆದರೆ, ಜನರ ಸ್ಥಿತಿಗತಿ ಮತ್ತು ರಾಜ್ಯದ ಪರಿಸ್ಥಿತಿಯನ್ನು ನೋಡಿಕೊಂಡು ರಾಜ್ಯ ಸರ್ಕಾರ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರ ಅವಸರದ ನಿರ್ಧಾರ ತೆಗೆದುಕೊಳ್ಳುವದಿಲ್ಲ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾದ ಬಳಿಕವೂ ಈ ಕುರಿತಾಗಿ ಯಾವುದೇ ಚರ್ಚೆಯೂ ನಡೆದಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಆಗುವುದು ಎಂಬುದು ಊಹಾಪೋಹವಷ್ಟೇ.. ರಾಜ್ಯದಲ್ಲಿ ಸದ್ಯ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತಾಗಿ ಚರ್ಚೆ ನಡೆಸೋಣ ಎಂದಿದ್ದಾರೆ.

ಜೀವಯೂ ಉಳಿಯಬೇಕು, ಜೀವನವೂ ನಡೆಯಬೇಕು:

ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ. ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು ಎನ್ನುವ ತೀರ್ಮಾನ ಕೈಗೊಂಡಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button