Latestಮೆಟ್ರೋರಾಜ್ಯಸುದ್ದಿ

ಒಮಿಕ್ರಾನ್ ತಳಿ ಪತ್ತೆ: ಔಷಧ ಹಾಗೂ ಚಿಕಿತ್ಸೆಯ ನಿಯಮಗಳ ಬಗ್ಗೆ ತಜ್ಞರೊಂದಿಗೆ ಸಭೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಇಬ್ಬರಿಗೆ ಕೊರೊನಾದ ಒಮಿಕ್ರಾನ್ ರೂಪಾಂತರಿ ತಳಿ ಜಿನೋಮ್ ಸೀಕ್ವೆನ್ಸಿಂಗ್ ಮೂಲಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಯಾವ ರೀತಿಯ ಔಷಧ ಹಾಗೂ ಚಿಕಿತ್ಸೆಯ ನಿಯಮಗಳನ್ನು ಪಾಲಿಸಬೇಕೆನ್ನುವ ಬಗ್ಗೆ ಇಂದು ತಜ್ಞರ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ದೆಹಲಿಯಿಂದ ಇಂದು ಬೆಂಗಳೂರಿಗೆ ಹಿಂದುರುಗಿದ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದರು.

ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕೇಸ್ ಹಿಸ್ಟರಿ ಸಮೇತ ಪತ್ತೆ ಹಚ್ಚಲಾಗುವುದು. ವೈದ್ಯಕೀಯವಾಗಿ ತಳಿ ಯಾವ ರೀತಿ ಇದೆ ಹಾಗೂ ಇದಕ್ಕೆ ವಿವಿಧ ದೇಶಗಳಲ್ಲಿ ಯಾವ ನಿಯಮಗಳನ್ನು ಅನುಸರಿಸಲಾಗುತ್ತಿದೆ ಎನ್ನುವ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button