Prasidh Krishna: ಟೆಸ್ಟ್‌ಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ವೇಗದ ಬೌಲರ್ ಪ್ರಸೀದ್ಧ್ ಕೃಷ್ಣ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎಂದಿನಂತೆ ಕೆ.ಎಲ್. ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಮಧ್ಯಮ ವೇಗಿ ಪ್ರಸಿದ್ಧ್ ಕೃಷ್ಣ ಈಗಾಗಲೇ ಭಾರತ ತಂಡದ ಪರ ಏಕ ದಿನ ಕ್ರಿಕೆಟ್ ಆಡಿರುತ್ತಾರೆ.
ವಿರಾಟ್ ಕೊಹ್ಲಿ ಅವರು ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಗೊಂಡವರ ಪಟ್ಟಿಯಲ್ಲಿದ್ದರೂ ಅವರು ಎರಡನೇ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಜಿಂಕ್ಯ ರಹಾನೆ ತಂಡದ ನಾಯಕರಾಗಿದ್ದು, ಚೇತೇಶ್ವರ ಪೂಜಾರ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ತಂಡದ ವಿವರ:
ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಪೂಜಾರ), ಕೆ.ಎಲ್. ರಾಹುಲ್, ಮಾಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ವೃದ್ಧಿಮಾನ್ ಸಹಾ, ಶ್ರೇಯಸ್ ಅಯ್ಯರ್, ಕೆ.ಎಸ್.ಭರತ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ವಿರಾಟ್ ಕೊಹ್ಲಿ.



