
ನವದೆಹಲಿ: 11 ನೇ ಶತಮಾನದ ಸುಧಾರಕ ಮತ್ತು ವೈಷ್ಣವ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣೆಯ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಲು ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಗೆ ಭೇಟಿ ನೀಡಲಿದ್ದಾರೆ. ವೈಷ್ಣವ ಸಂತರ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ಕರೆಯಲಾಗಿದೆ.
ಇನ್ನು ಅವರ 1,000 ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಮತ್ತು ಹಿಂದೂ ಧರ್ಮವನ್ನು ಸುಧಾರಿಸಲು ಅವರು ಮಾಡಿದ ಕೆಲಸಗಳನ್ನು ಸ್ಮರಿಸುವ ಸಲಿವಾಗಿ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ.. ಜೊತೆಗೆ ರಾಮಾನುಜಾಚಾರ್ಯರ ಪ್ರತಿಮೆಯು ಪಂಚಲೋಹದಿಂದ ಮಾಡಲ್ಪಟ್ಟಿದೆ. ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಜಿಂಕ್ ಸಮ್ಮಿಶ್ರಣದಿಂದ ನಿರ್ಮಿಸಲಾಗಿರುವ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ.
ರಾಮಾನುಜಾಚಾರ್ಯರ ಕೃತಿಗಳಿಗೆ ಸಂಬಂಧಿಸಿದ ಅನೇಕ ಗ್ಯಾಲರಿ, ಪುಸ್ತಕಗಳು ಮತ್ತು ಡಿಜಿಟಲ್ ಲೈಬ್ರರಿ ಭದ್ರ ವೇದಿಕೆ ಕಟ್ಟಡದಲ್ಲಿ ಇದೆ. ಶ್ರೀ ರಾಮಾನುಜಾಚಾರ್ಯರ ಆಶ್ರಮದ ಶ್ರೀ ಚಿನ್ನ ಜೀಯರ್ ಪರಿಕಲ್ಪನೆಯಲ್ಲಿ ಇದು ಮೂಡಿಬಂದಿದೆ.



