Breaking NewsLatestರಾಷ್ಟ್ರೀಯಸುದ್ದಿ
ವಾರಣಾಸಿಯಲ್ಲಿ ಮೋದಿ ಪ್ರಚಾರ: ಸ್ಥಳೀಯ ಟೀ ಸೇವಿಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು ಶುಕ್ರವಾರ ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ ವಿಧಾನ ಸಭಾ ಚುನಾವಣೆಯ ಅಂಗವಾಗಿ ಪ್ರಚಾರ ನಡೆಸಿದರು. ಈ ವೇಳೆ ಸ್ಥಳೀಯರೊಂದಿಗೆ ಸಾಮಾನ್ಯರಂತೆ ಬೆರೆತ ಮೋದಿ ಸ್ಥಳೀಯ ಟೀಯನ್ನ ಸವಿದರು. ಜತೆಗೆ ಕಾಶಿಯ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಡಮರುಗ ಭಾರಿಸಿದುರ. ಸ್ಥಳಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಮೋದಿ ವ್ಯಾಪಾರಸ್ಥರೊಂದಿಗೆ ಮಾತುಕತೆ ನಡೆಸಿದರು. ಸೋಮವಾರ ಉತ್ತರ ಪ್ರದೇಶದಲ್ಲಿ 7ನೇ ಹಂತದ ಮತದಾನ ನಡೆಯಲಿದ್ದು, ಇದರಲ್ಲಿ ವಾರಣಾಸಿ ಕ್ಷೇತ್ರವೂ ಸೇರಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
