Latestರಾಷ್ಟ್ರೀಯಸುದ್ದಿ

ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಪ್ರಧಾನಿ ಮೋದಿಯೂ ಕೈ ಜೋಡಿಸಿದ್ದು, ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಪ್ರಧಾನಿ.ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button