Latestಮನರಂಜನೆಸಿನಿಮಾಸೆಲೆಬ್ರಿಟಿ

ಮುಂದೂಡಲಾಯ್ತು ವಿಕ್ರಾಂತ್ ರೋಣ ಚಿತ್ರದ ರಿಲೀಸ್ ಡೇಟ್

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಕಾರಣದಿಂದ ಸಾಕಷ್ಟು ಉದ್ಯಮಗಳು ನಷ್ಟ ಅನುಭವಿಸುತ್ತಿವೆ. ಕೊರೊನಾದಿಂದಾಗಿ ಬಿಗ್ ಬಜೆಟ್​ನ ಸಾಕಷ್ಟು ಸಿನಿಮಾಗಳ ರಿಲೀಸ್ ಡೇಟ್ ಮುಂದೂಡಲಾಗಿದ್ದು ಇದೀಗ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಮುಂದೂಡಲಾಗಿದೆ. ಈ ಬಗ್ಗೆ ಚಿತ್ರದ ನಿರ್ಮಾಪಕ ಜಾಕ್ ಮಂಜು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಕನಸನ್ನ ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚಾದ್ಯಂತ ನಮ್ಮ ಸಿನಿಮಾವನ್ನ ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎನ್ನುವ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇನೆ ಎಂದು ಜಾಕ್ ಮಂಜು ಬರೆದುಕೊಂಡಿದ್ದಾರೆ.

ಅನೂಪ್ ಭಂಡಾರಿ ನಿರ್ದೇಶನದಲ್ಲಿ ರೆಡಿಯಾಗಿರೋ ವಿಕ್ರಾಂತ್ ರೋಣ ಚಿತ್ರದಲ್ಲಿ ಸುದೀಪ್​ಗೆ ಜೋಡಿಯಾಗಿ ನೀತಾ ಅಶೋಕ್ ಬಣ್ಣ ಹಚ್ಚಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button