
ನವದೆಹಲಿ: ಈ ವರ್ಷದ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದರು. ಇಂದು ಮಹಾತ್ಮ ಗಾಂಧಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗಾಂಧಿಯನ್ನು ನೆನೆದು ಗೌರವಿಸಿದರು.
ಈ ವೇಳೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರತಿಯೊಬ್ಬ ನಾಗರಿಕರು ಕೂಡ ಒಮ್ಮೆಯಾದರೂ ಭೇಟಿ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವರ್ಷ ದೇಶದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಅಮರ್ ಜವಾನ್ ಜ್ಯೋತಿ ಕುರಿತಂತೆ ಆನೇಕರು ತಮಗೆ ಪತ್ರ ಬರೆದಿದ್ದಾರೆ. ಭಾರತೀಯ ಸೇನೆಯಲ್ಲಿರುವ ಅನೇಕ ಸೈನಿಕರು ನನಗೆ ಪತ್ರ ಬರೆದಿದ್ದಾರೆ. ಆ ಮೂಲಕ ಪ್ರತಿಯೊಬ್ಬ ಹುತಾತ್ಮರ ಬದುಕಿನಲ್ಲಿ ಮತ್ತು ಅವರ ಕುಟುಂಬದವರಿಗೆ ಅಮರ್ ಜವಾನ್ ಜ್ಯೋತಿಯ ಮಹತ್ವ ಎಷ್ಟಿದೆ ಎಂಬುದನ್ನ ಪತ್ರದ ಮೂಲಕ ತಿಳಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಇನ್ನು ಭಾರತದ ಪ್ರತಿಯೊಬ್ಬರು ಕೂಡ ತಮ್ಮ ಕುಟುಂಬದವರ ಜೊತೆ ಬಂದು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಬೇಕು. ನಿಮಗೆ ಇಲ್ಲಿ ಒಂದು ವಿಶೇಷ ಶಕ್ತಿಯ ಅನುಭವವಾಗುತ್ತದೆ ಮತ್ತು ಸ್ಫೂರ್ತಿ ಸಿಗುತ್ತದೆ ಎಂದು ಪ್ರಧಾನಿ ಮೋದಿ ಒತ್ತಾಯಿಸಿದ್ದಾರೆ.



