Latestಮನರಂಜನೆರಾಜ್ಯಸಿನಿಮಾಸುದ್ದಿ

ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು

ಬೆಂಗಳೂರು: ನಗರದ ಗೊಟ್ಟಿಗೆರೆ-ನಾಗವಾರ ಮಾರ್ಗದಲ್ಲಿ ನಿರ್ಮಾಣವಾಗಲಿರುವ ಪಾಟರಿಟೌನ್​ ಮೆಟ್ರೊ ರೈಲು ನಿಲ್ದಾಣಕ್ಕೆ ನಿಧನರಾದ ನಟ ಪುನೀತ್ ರಾಜ್​ಕುಮಾರ್ ಹೆಸರು ಇಡುವಂತೆ ಪ್ರಧಾನಿ ಕಾರ್ಯಾಲಯವು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರು ಇರಿಸುವ ಮೂಲಕ ಅವರ​ ಹೆಸರು ನೆನಪು ಆಗುವಂತೆ ಮಾಡಿ ಎಂದು ಕರ್ನಾಟಕ ಬಹುಜನ ಫೆಡರೇಷನ್ ಜನವರಿ 2 ರಂದು ಪ್ರಧಾನಿ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿತ್ತು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಕಾರ್ಯಾಲಯದಿಂದಲೂ ಸ್ಪಂದನೆ ಸಿಕ್ಕಿದ್ದು, ಕರ್ನಾಟಕ ಸರ್ಕಾರವು ಶೀಘ್ರ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪುಲಿಕೇಸಿ ನಗರ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್​ಕುಮಾರ್ ಹೆಸರನ್ನು ಇರಿಸಬೇಕೆಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರ್ನಾಟಕ ಬಹುಜನ ಫೆಡರೇಷನ್ ಸಂಘಟನೆ ಮನವಿ ಮಾಡಿತ್ತು. ಈ ಕುರಿತು ಸಂಸದ ಡಿ.ವಿ.ಸದಾನಂದಗೌಡರ ಅವರಿಗೂ ಮನವಿ ಪತ್ರ ನೀಡಲಾಗಿತ್ತು.

ರಾಜ್ಯದ ಹೆಮ್ಮೆಯ ನಟ ಪುನೀತ್ ಅವರನ್ನು ಕನ್ನಡಿಗರು ಹಲವು ರೀತಿಗಳಲ್ಲಿ ಗೌರವಿಸುತ್ತಿದ್ದಾರೆ. ಬಿಬಿಎಂಪಿ ನೌಕರರ ಸಂಘವು ಬೆಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ನಗರದ ಯಾವುದಾದರೂ ಒಂದು ಮೆಟ್ರೊ ನಿಲ್ದಾಣಕ್ಕೆ ಪುನೀತ್ ಹೆಸರು ನಾಮಕರಣ ಮಾಡಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬಂದಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button