
ಚಂಡೀಗಢ: ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 14 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ ಒಂದು ಸ್ಥಾನ ಗೆದ್ದಿದೆ.
ಮಹಾನಗರ ಪಾಲಿಕೆಯ 35 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಐದು ವರ್ಷಗಳಿಗೊಮ್ಮೆ ನಡೆಯುವ ಪುರಸಭೆ ಚುನಾವಣೆ – ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿತ್ತು. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರವೇಶದಿಂದ ತ್ರಿಕೋನ ಸ್ಪರ್ಧೆ ನಡೆದಿತ್ತು.
ಎಎಪಿಯ ಗೆಲುವು ಬದಲಾವಣೆಯ ಸಂಕೇತ: ಕೇಜ್ರಿವಾಲ್
ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಈ ಗೆಲುವು ಪಂಜಾಬ್‌ನಲ್ಲಿ ಮುಂಬರುವ ಬದಲಾವಣೆಯ ಸಂಕೇತವಾಗಿದೆ ಎಂದು ಆಪ್ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.



